Friday, November 30, 2007

ಈ ದಿನ ಖುಶಿಯಾಗಿದೆ..

ಈ ಚಿತ್ರಕ್ಕೆ ಹೋಗೊದೊ ಬೇಡವೊ ಅಂತಿದ್ದೆ.. ಹೊಸ ನಟರು, ನಿರ್ದೇಶಕರು.. ಹೇಗಿರುತಪ್ಪಾ ಅಂತ ಹೋಗಿದ್ದು.. ಆದ್ರೆ ಅಷ್ಟೇನು ನಿರಾಸೆ ಆಗಲಿಲ್ಲ :) ಚಿತ್ರ ಮಂದಿರದಿಂದ ಹೊರಗೆ ಬರುತ್ತಾ ಈ ಹಾಡನ್ನೆ ಹಾಡುತ್ತ ಬಂದೆ :)

"ಈ ದಿನ ಖುಶಿಯಾಗಿದೆ
ನನಗೀಗ ಏನಾಗಿದೆ?
ಈ ತರ ಹೋಸ ಕಾತುರ ನನಗೇಕೆ ಹೀಗಾಗಿದೆ?

ನನ್ನಲ್ಲಿ ನಾನಿಲ್ಲ
ಹೀಗೆಕೊ ಗೊತ್ತಿಲ್ಲ..
ಹಾರಾಡಿದೆ ಮನಸೆಲ್ಲಾ!
ಏನಂತ ಗೊತ್ತಿಲ್ಲ
ಒಂದೊಂದು ಹೊತ್ತಿಲ್ಲ
ನಂಗೆನೊ ಆಗ್ತೈತಲ್ಲಾ.."

ಪೂರ್ತಿ ಸಾಹಿತ್ಯಕ್ಕೆ ಇಲ್ಲಿ ಕ್ಲಿಕಿಸಿ!

ಚಿತ್ರ: ೭ ಒ’ ಕ್ಲಾಕ್
ಸಾಹಿತ್ಯ: ಕೆ. ರಾಮ್ ನಾರಯಣ್
ಗಾಯನ: ರಾಜೇಶ್ ಕೃಷ್ಣನ್, ನಿತ್ಯ ಸಂತೋಶಿಣಿ

3 comments:

Anonymous said...

ನಗುವು ಸಹಜದ ಧರ್ಮ
ನಗಿಸುವುದು ಪರ ಧರ್ಮ
ನಗುವ ನಗಿಸುತ ನಗಿಸಿ
ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ-
ಎಂದವರು ಡಿ.ವಿ.ಜಿ. ಜೀವನವನ್ನು ನೋಡುವ ದೃಷ್ಟಿಯಲ್ಲಿ ನವಿರಾದ ಹಾಸ್ಯವನ್ನು ಬೆರೆಸಿಕೊಂಡು ಬಿಟ್ಟರೆ ಯಾವ ಕಷ್ಟಗಳೂ ನಮ್ಮನ್ನು ಕುಗ್ಗಿಸುವುದಿಲ್ಲ, ಅವಮಾನಗಳು ನಮ್ಮನ್ನು ನಿರ್ನಾಮ ಮಾಡುವುದಿಲ್ಲ. ಹಾಸ್ಯ ಶಾಕ್ ಅಬ್ಸಾರ್ವರ್‌ನಂತೆ ಆಘಾತಗಳನ್ನು ತಾಳಿಕೊಳ್ಳಬಲ್ಲ ಶಕ್ತಿಯನ್ನು ಕೊಡುತ್ತದೆ.
ಕನ್ನಡದಲ್ಲಿ ವೈವಿಧ್ಯಮಯ ಹಾಸ್ಯಕ್ಕಾಗಿ ಮೀಸಲಾದ ಬ್ಲಾಗ್ ‘ನಗೆ ನಗಾರಿ ಡಾಟ್ ಕಾಮ್’.
ವಿಳಾಸ: http://nagenagaaridotcom.wordpress.com/

ದಯವಿಟ್ಟು ಒಮ್ಮೆ ಇಲ್ಲಿ ಭೇಟಿಕೊಡಿ. ನಿಮ್ಮ ಮುಖದ ಮೇಲೆ ತೆಳುನಗೆಯ ಗೆರೆ ಮೂಡದಿದ್ದರೆ ಕೇಳಿ. ಇಷ್ಟವಾದರೆ ನಿಮ್ಮ ಬ್ಲಾಗ್ ಫೀಡಿನಲ್ಲಿ ಇದನ್ನು ಸೇರಿಸಿಕೊಳ್ಳಿ, ಮೆಚ್ಚುಗೆಯಾದರೆ ನಿಮ್ಮ ಇತರೆ ಗೆಳೆಯ, ಗೆಳತಿಯರಿಗೆ ಇದರ ಬಗ್ಗೆ ತಿಳಿಸಿ.

ನಗೆ ಸಾಮ್ರಾಟ್

ಶ್ರೀನಿಧಿ.ಡಿ.ಎಸ್ said...

ನಮಸ್ತೇ ಸ್ವರ,

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ‘ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ‘ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ‘ಸಂಪದ’ದ ಹರಿಪ್ರಸಾದ್ ನಾಡಿಗ್, ‘ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ‘ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಶ್ರೀನಿಧಿ.ಡಿ.ಎಸ್.

ಕನ್ನಡ ಹನಿಗಳು said...

ಪ್ರಿಯ ಆತ್ಮೀಯ ಕನ್ನಡ ಸ್ನೇಹಿತರೆ,

ನಾನು ಕನ್ನಡ ಹನಿಗಳ ಬಳಗದಿಂದ ವಿನಂತಿಸಿಕೊಳ್ಳುತ್ತಿರುವುದೇನೆಂದರೆ, ನಮ್ಮ ಕನ್ನಡ ಹನಿಗಳು ಹಾಸ್ಯ್, ಕವನ, ಹನಿಗವನ ಇನ್ನೂ ಹತ್ತು ಹಲವನ್ನು ಹೊಂದಿದೆ.

http://kannadahanigalu.com/

ನೀವು ಮೀಕ್ಷಿಸಿ, ನಿಮ್ಮ ಬ್ಲಾಗ್‍ನಲ್ಲಿ ಪ್ರಕಟಿಸುವಿರಾ, ಹಾಗೆಯೇ ಕನ್ನಡ ಹನಿಗಳಲ್ಲಿಯು ನಿಮ್ಮ ಬ್ಲಾಗ್‍ನ್ನು ಪ್ರಕಟಿಸುತ್ತೇವೆ.

ಹಾಗೆಯೇ ಸಾದ್ಯವಾದಲ್ಲಿ ನಿಮ್ಮಲ್ಲೂ ಕವನ, ಚುಟುಕ, ಕವಿತೆ, ಹಾಸ್ಯ ಮುಂತಾದವುಗಳಿದ್ದರೆ ನಿಮ್ಮ ಹೆಸರಿನಲ್ಲಿ ಪ್ರಕಟಿಸಿ, ಮತ್ತೆಲ್ಲಾ ಸ್ನೇಹಿತರಿಗೂ ತಲುಪುವಂತೆ ಮಾಡಿ.

ದಯವಿಟ್ಟು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಾಗಳಿಗೆ ನಮಗೆ ಬರೆದು ತಿಳಿಸಿ.

ಧನ್ಯವಾದಗಳೊಂದಿಗೆ.....
Kannadahanigalu Team
kannadajokes@gmail.com